ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: uttara kannada news
ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?
ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು. ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ...
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್‌ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ,...
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂದ್ರು, ವಿ.ಎಸ್.ಪಾಟೀಲ್, ಮಾಜಿ ಶಾಸಕರ ಮನದಾಳದ ಮಾತು ಎಂಥಾದ್ದು ಗೊತ್ತಾ..?
ಮುಂಡಗೋಡ: ತಮ್ಮ ಸುಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ತಮ್ಮ ಮನದಾಳದ ನೋವು ಹಂಚಿಕೊಂಡಿರೋ ಪಾಟೀಲರು, ಮಮ್ಮಲ ಮರುಗಿದ್ದಾರೆ. ಯಾವ ತಂದೆಗೂ ಈ ಪರಿಸ್ಥಿತಿ ಬರೋದು ಬೇಡ ಅಂತ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಸುಪುತ್ರನ ವಿರುದ್ಧವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ರಾ ವಿ.ಎಸ್.ಪಾಟೀಲ್..?
ವಿ.ಎಸ್.ಪಾಟೀಲ್, ಈ ಹೆಸ್ರು ಕೇಳಿದ್ರೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದ್ರಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ಅದೇನೋ ಒಂದು ಅಭಿಮಾನ. ಅದೇನೋ ಒಂದು ಪ್ರೀತಿ. ಅವರ ಅಪ್ಪಟ ಜವಾರಿ ಭಾಷೆಯ ಮಾತುಗಳು, ನೇರ ನುಡಿಗಳು, ನಿಷ್ಕಲ್ಮಶ ಮನಸ್ಸು ಹೀಗೆ ಅವ್ರನ್ನ ನಾನು ಇವತ್ತಿಗೂ ಒಬ್ಬ ರಾಜಕಾರಣಿ ಅಂತಾ ನೋಡಿಯೇ ಇಲ್ಲ. ಅವ್ರು ನಮ್ಮ ಮಾರ್ಗದರ್ಶಿ ಸ್ಥಾನದಲ್ಲಿ ಯಾವಾಗ್ಲೂ ಇರ್ತಾರೆ. ಹೀಗಿರೋ ಅವ್ರಿಗೆ ಇಂತಹದ್ದೊಂದು ಪರಿಸ್ಥಿತಿ ಬಂದಿದೆಯಾ..? ಆ ಮಟ್ಟಿಗಿನ ಅನಿವಾರ್ಯತೆ ಎದುರಾಗಿದೆಯಾ..? ನಿಜಕ್ಕೂ ವಿ.ಎಸ್.ಪಾಟೀಲರ ಮನಸ್ಸು ಈ ಮಟ್ಟಿಗೆ...
ಹಳಿಯಾಳದಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಪೌರಕಾರ್ಮಿಕರ ಪ್ರತಿಭಟನೆ, ಮಳೆಯ ನಡುವೆಯೂ ಆರದ ಕಿಚ್ಚು..!
ಹಳಿಯಾಳ: ಪಟ್ಟಣದ ಪುರಸಭೆಯ ಪೌರ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರೋ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸುರಿಯುತ್ತಿರೋ ಮಳೆಯನ್ನು ಲೆಕ್ಕಿಸದೆ ಮುಷ್ಕರದಲ್ಲಿ ನಿರತರಾಗಿರೋ ಪೌರಕಾರ್ಮಿಕರು, ತಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ ಅಂತಾ ಜಿದ್ದಿಗೆ ಬಿದ್ದಿದ್ದಾರೆ. ಅನಿರ್ಧಿಷ್ಟ ಧರಣಿ ನಡೆಸುವ ಮೂಲಕ ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘದ ಹಳಿಯಾಳ ಘಟಕದ ತಾಲೂಕಾಧ್ಯಕ್ಷ ಫಯಾಜ್ ಅಹ್ಮದ್ ಗೊರೆಖಾನ್, ಉಪಾಧ್ಯಕ್ಷೆ ಲಲಿತ ಚಲವಾದಿ, ಕಾರ್ಯದರ್ಶಿ ಮಂಜುನಾಥ್ ಮಾದಾರ, ಫ್ರಾನ್ಸಿಸ್ ಬ್ರುಗಾಂಜ,...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
ಸಿಡ್ಲಗುಂಡಿ ಬಳಿ ಲಾರಿ, ಬೊಲೆರೊ ಮದ್ಯೆ ಮುಖಾಮುಕಿ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ..!
ಮುಂಡಗೋಡ:ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಪಘಾತವಾಗಿದೆ. ಅಶೋಕ ಲೈಲ್ಯಾಂಡ್ ಹಾಗೂ ಬುಲೆರೊ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡ್ಲಗುಂಡಿ, ಮೈನಳ್ಳಿ ಸಮೀಪದ ಕಿರು ಸೇತುವೆ ಬಳಿ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ, ಡಿಕ್ಕಿಯ ರಭಸಕ್ಕೆ ಅಶೋಕ ಲೈಲಾಂಡ್ ಲಾರಿ ಉರುಳಿ ಬಿದ್ದಿದೆ. ಇಷ್ಟಾದ್ರೂ, ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬೊಲೆರೋ ವಾಹನದಲ್ಲಿ ಸಾಕಷ್ಟು ಜನ ಪ್ರಯಾಣಿಕರಿದ್ರು. ಆದ್ರೆ ಯಾರಿಗೂ ತೊಂದರೆಯಾಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ...









