ಟಿಬೇಟಿಯನ್ ಕಾಲೋನಿಯಲ್ಲಿ ಅಣ್ಣನಿಂದಲೇ ತಮ್ಮನ ಭೀಕರ ಹತ್ಯೆ..! ಕ್ಯಾಂಪ್ ನಂಬರ್ 7 ರಲ್ಲಿ ಬೆಚ್ಚಿಬೀಳಿಸುವ ಘಟನೆ..!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 7ರಲ್ಲಿ ಅಣ್ಣನೇ ತಮ್ಮನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಅಣ್ಣನೇ ಕೊಂದನಂತೆ..!
ಹೌದು, ಒಂದೇ ಕುಟುಂಬದ ಅಣ್ಣತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. ಕರ್ಮಾ (ಸುಮಾರು 40) ಕೊಲೆಯಾದ ವ್ಯಕ್ತಿಯಾಗಿದ್ದು, ಸೋನಮ್ ಎಂಬಾತನೇ ತನ್ನ ತಮ್ಮನನ್ನು ಹತ್ಯೆ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಗಳದ ಕೊಲೆನಾ..?
ರಾತ್ರಿ ಯಾವುದೋ ಕಾರಣಕ್ಕೆ ಅಣ್ಣತಮ್ಮಂದಿರ ನಡುವೆ ಜಗಳ ಶುರುವಾಗಿದ್ದು, ಈ ಜಗಳ ವಿಕೋಪಕ್ಕೆ ತಿರುಗಿ ಅಣ್ಣ ಸೋನಮ್ ತನ್ನ ತಮ್ಮ ಕರ್ಮಾನನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ.

ಘಟನೆಗೆ ನಿಖರ ಕಾರಣವೇನು..? ಜಗಳಕ್ಕೆ ಕಾರಣವಾದ ವಿಷಯವಾದರೂ ಏನು..? ಇನ್ನು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.