ಹಾನಗಲ್: ಧರ್ಮಾ ಜಲಾಶಯದ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರ ಬಾಲಕರು ನೀರುಪಾಲಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಸೃಜನ್ ಬ್ಯಾತನಾಳ (10), ಸಚಿನ್ ಬ್ಯಾತನಾಳ (12) ಇಬ್ಬರು ನೀರುಪಾಲಾದ ಬಾಲಕರಾಗಿದ್ದಾರೆ.

ಇಬ್ಬರೂ ಸಹೋದರರು ಬೇಸಿಗೆ ರಜೆಗಾಗಿ, ಕಂಚಿನೆಗಳೂರು ಗ್ರಾಮದ ಸಂಬಂಧಿಕರ ಮನೆಗೆ ಇನಾಮ್ ನೀರಲಗಿಯಿಂದ ಬಂದಿದ್ದರು. ಹೀಗಾಗಿ, ಇಂದು ಧರ್ಮ ಕಾಲುವೆಯಲ್ಲಿ ಈಜಲು ತೆರಳಿದ್ದರು. ಈಜು ಬಾರದೆ ಧರ್ಮ ಕಾಲುವೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…
ಈಜಲು ತೆರಳಿದ್ದ ಯುವಕ ಸಾವು..!
ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಮಂತಗಿ ಗ್ರಾಮದ ಬಳಿ ನಡೆದಿದೆ.

ಉತ್ತರಪ್ರದೇಶ ಮೂಲದ ಪೈಜಾನ್ (21) ಎಂಬುವವನೇ ಮೃತಪಟ್ಟ ಯುವಕ ಎನ್ನಲಾಗಿದೆ. ಸಮ್ಮಸಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ಸಲ್ಯೂನ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಈತ, ಕೆರೆಯಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಹಾನಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.