ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಗಿನಕೊಪ್ಪ, ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಮಲಬಾರ್ ಕಾಲೋನಿ ಮತ್ತು ನಂದಿಗಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸನಾಳ ಗ್ರಾಮದಲ್ಲಿ ಜೆಜೆಎಮ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪಡೆದುಕೊಂಡ ಮನೆಗಳಿಗೆ ಭೇಟಿ ನೀಡಿ, ನೀರಿನ ಪೂರೈಕೆ, ಶುದ್ಧತೆ ಮತ್ತು ಉಪಯೋಗದ ಕುರಿತು ಫಲಾನುಭವಿಗಳಿಂದ ಮಾಹಿತಿ ಪಡೆದರು.
ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಾಶಯಕ್ಕೆ ಭೇಟಿ ನೀಡಿ, ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಪ್ರಗತಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ರು. ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ, ಯೋಜನೆಯಂತೆ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಶಿರಸಿ ತಾಲೂಕಿನಲ್ಲೂ CEO ಭೇಟಿ..!
ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ್ ನ ಕಲ್ಲಿ, ಗುಡ್ನಾಪುರ ಗ್ರಾಮ ಪಂಚಾಯತ್ ನ ನವಣಗೇರಿ, ಭಾಶಿ ಗ್ರಾಮ ಪಂಚಾಯತ್ ನ ಯಡೂರಬೈಲ್ ಗ್ರಾಮದಲ್ಲಿ ಅನುಷ್ಠಾನಗೊಂಡ ಜಲಜೀವನ್ ಮಿಷನ್ ಯೋಜನೆಯ ಸದುಪಯೋಗ ಪಡೆದ ಮನೆಗಳಿಗೆ ಭೇಟಿ ನೀಡಿ ನೀರಿನ ಸದ್ಭಳಕೆ ಕುರಿತು ಫಲಾನುಭವಿಗಳಿಂದ ಖುದ್ದಾಗಿ ಮಾಹಿತಿ ಪಡೆದು ನೀರಿನ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬನವಾಸಿ ಹಾಗೂ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಸ್ಥಳವನ್ನು ಪರಿಶೀಲಿಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ZP CEO VISIT; ಈ ಸಮಯದಲ್ಲಿ ಬನವಾಸಿ ಗ್ರಾಮ ಪಂಚಾಯತ್ ನಂಬರ್ 3 ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿ, ಹಾಜರಾತಿ, ಆಹಾರ, ಆಟಿಕೆ, ಮೂಲಭೂತ ಸೌಲಭ್ಯಗಳು ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲಿಸಿ ಮಕ್ಕಳ ಸುರಕ್ಷತೆ ಕುರಿತು ಜಾಗ್ರತೆ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಶಿರಸಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ, ಮುಂಡಗೋಡ ತಾಪಂ ಕಾರ್ಯನಿರ್ವಹಣಾಧಿಕಾರಿ, ಜೆಜೆ ಎಮ್ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!