ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ.


ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.