ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!

ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!

ಮುಂಡಗೋಡ: ಪಟ್ಟಣದ ಗಾಂಧಿನಗರ ಸ್ಲಂ ಬೋರ್ಡ್ ಘೋಷಣೆಗೆ ಸಂಬಂಧಿಸಿದಂತೆ ಶನಿವಾರ ಜಂಟಿ ತನಿಖಾ ತಂಡಕ್ಕೆ ಗಾಂಧಿನಗರದ ನಿವಾಸಿಗಳು ಪರ-ವಿರೋಧ ಪ್ರತ್ಯೇಕ ವಾಗಿ ದಾಖಲೆ ಸಮೇತ ಮನವಿ ಸಲ್ಲಿಸಿದ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರದ ಇಪ್ಪತೈದು ಎಕರೆ ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಇದ್ದರು ಸುಳ್ಳು ದಾಖಲೆ ನೀಡಿ ಸ್ಲಂ ಬೋರ್ಡ್ ಘೋಷಣೆ ಮಾಡಲಾಗಿದೆ. ಎಂದು ವೇಕಟೇಶ ಶಿರಾಲಿ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು ಈ ದೂರಿನ ಅನ್ವಯ ಜಿಲ್ಲಾ ಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ಸತ್ಯ ಶೋಧನಾ ವರದಿ ನೀಡುವಂತೆ ಜಂಟಿ ತನಿಖಾ ತಂಡ ರಚಿಸಿದ್ದರು. ಈ ತಂಡದಲ್ಲಿ ಜಿಲ್ಲಾ ಕಾರ್ಯ ನಿರ್ವಾಹಕ ಅಭಿಯಂತರ ಎ ರವಿಕುಮಾರ, ಜಿಲ್ಲಾ ನಗರಕೋಶ ಎಇಇ ಕೆಎಸ್ ಕಮ್ಮಾರ್, ಸ್ಲಂ ಬೋರ್ಡ್ ಅಧಿಕಾರಿ ಪ್ರತೀಕ್ ದಳವಾಯಿ, ಜಿಲ್ಲಾ ನಗರಸಭೆ ತಹಶೀಲ್ದಾರ್ ರವಿರಾಜ್ ದೀಕ್ಷತ್, ಇಲ್ಲಿನ ಉಪತಹಶೀಲ್ದಾರ ಚಂದ್ರಶೇಖರ ಹೊಸಮನಿ ಮತ್ತು ಪ.ಪಂ ಮುಖ್ಯಾಧಿಕಾರಿ ಚಂದ್ರಶೇಖರ ಒಳಗೊಂಡಂತೆ ಸಮಿತಿ ರಚಿಸಿ. 15 ದಿನಗಳವೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರು. ಅದರಂತೆ...

ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!

ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!

ಮುಂಡಗೋಡ: ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಹೆಚ್ಚು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಅರಣ್ಯ ಬೆಳಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಖಾಂದೂ ಶನಿವಾರ ಹೇಳಿದ್ರು.. ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುಕೂಲತೆಯಿದೆ ಆದರೆ ಅರಣ್ಯ ಇಲಾಖೆಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುತ್ತಿಲ್ಲ ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಉತ್ತಮ ಕಾಮಗಾರಿ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದರು ಅಲ್ದೆ, ತಾಲೂಕಿನಲ್ಲಿರುವ ಹದಿನಾರು ಗ್ರಾಮ ಪಂಚಾಯಿತಿಯವರು ಉದ್ಯೋಗ ಖಾತ್ರಿ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕರಿಗೆ ಕೆಲಸ ನೀಡಿದ್ದು ಮುಂದಿನ ದಿನಗಳಲ್ಲಿಯೂ ಇದೆ ರೀತಿಯಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು. ಅಂಗನವಾಡಿಗೆ ಭೇಟಿ..! ಆರಂಭದಲ್ಲಿ ಮೈನಳ್ಳಿ ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಶಾಲೆ, ಅಂಗನವಾಡಿ ಕೆಂದ್ರಗಳಿಗೆ ಭೇಟಿ ನೀಡಿ...

ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!

ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!

ಮುಂಡಗೋಡ ಪಟ್ಟಣದ ಸರ್ವೆ ನಂಬರ್ 186 ರ ಗಾಂಧಿ ನಗರ ಪ್ರದೇಶವನ್ನು ಸುಳ್ಳು ಹಾಗೂ ತಪ್ಪು ಮಾಹಿತಿ ನೀಡಿ, ಸ್ಲಂ ಅಂತಾ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಮುಂಡಗೋಡ ಪಟ್ಟಣ ಪಂಚಾಯತ್ ಹಾಗೂ ಸ್ಲಂ ಬೋರ್ಡ್ ಬೆಳಗಾವಿ ವಿರುದ್ಧ ಗಾಂಧಿನಗರದ ನಿವಾಸಿಗಳು ಇಂದು ಶನಿವಾರ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಗಾಂಧಿನಗರವನ್ನು ಸ್ಲಂ ಬೋರ್ಡ್ ಅಂತಾ ಮಾಡಿರುವುದನ್ನು ಕೂಡಲೇ ತಿದ್ದುಪಡಿ ಮಾಡಬೇಕು ಅಂತ ಆಗ್ರಹಿಸಿ, ಗಾಂಧಿನಗರ ನಿವಾಸಿಗಳು, ಬೆಳಿಗ್ಗೆ 11 ಗಂಟೆಗೆ ಗಾಂಧಿನಗರದಿಂದ ಪಟ್ಟಣ ಪಂಚಾಯತಿವರೆಗೂ ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಮೂಲಕ ಬಂದು, ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಲಿದ್ದಾರೆ. ಹಾಗಂತ ಮುಂಡಗೋಡ ಗಾಂಧಿನಗರ ಅಭಿವೃದ್ಧಿ ಸಮಿತಿ ಸದಸ್ಯರು ತಿಳಿಸಿದ್ದಾರೆ.  

ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಶುಂಠಿ ಹೊಲದಲ್ಲಿ ಕೂಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕನೋರ್ವ ವಿದ್ಯುತ್ ಗೆ ಬಲಿಯಾಗಿ, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ, ಮುಂಡಗೋಡ ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ನಡೆದಿದೆ‌. ಅಂದಹಾಗೆ, ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಬಸವರಾಜ್ ಚಂದ್ರಪ್ಪ ಹರಿಜನ್ (22) ವಿದ್ಯುತ್ ದುರಂತದಲ್ಲಿ ಜೀವ ಕಳೆದುಕೊಂಡ ನತದೃಷ್ಟನಾಗಿದ್ದಾನೆ. ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡವನಾಗಿದ್ದಾನೆ ಪಾಳಾ ಗ್ರಾಮದ ಮೂಕಪ್ಪ ಹರಿಜನ್ ಎಂಬಾತ, ಓಣಿಕೇರಿ ಗ್ರಾಮದಲ್ಲಿ ಬೇರೋಬ್ಬರ ಜಮೀನನ್ನು ಲಾವಣಿ ಮೇಲೆ ಪಡೆದು ಶುಂಠಿ ಕೃಷಿ ಮಾಡುತ್ತಿದ್ದಾರೆ. ಹೀಗಾಗಿ, ಇಂದು ಶುಂಠಿ ಕೀಳಲು ಹಾನಗಲ್ ತಾಲೂಕ್ ಬಾಳಂಬಿಡ್ ಗ್ರಾಮದ ಕೂಲಿ ಕಾರ್ಮಿಕರನ್ನು ಕರೆತಂದಿದ್ದರು‌. ಕಾರ್ಮಿಕರು ಮಧ್ಯಾಹ್ನ ಊಟದ ಸಮಯಕ್ಕೆ ಪಕ್ಕದ ಮಾರುತಿ ಹರಿಜನ ಎಂಬುವವರ ಜಮೀನಿನಲ್ಲಿ ಮರದ ಕೆಳಗೆ ಕುಳಿತು ಊಟ ಮಾಡಲು ತೆರಳುತ್ತಿದ್ದರು. ಈ ವೇಳೆ ಅಲ್ಲೆ ಹಾದು ಹೋಗಿದ್ದ ವಿದ್ಯುತ್ ವೈಯರ್ ತುಳಿದು ಕೂಲಿ ಕಾರ್ಮಿಕ ಸ್ಥಳದಲ್ಲೇ ಮೃರಪಟ್ಟಿದ್ದಾನೆ. ಇದೇ ವೇಳೆ ಮತ್ತೋರ್ವ ಕೂಲಿ ಕಾರ್ಮಿಕ ಹರೀಶ್ ರಾಮಣ್ಣ ಹರಿಜನ್ ಗಾಯಗೊಂಡಿದ್ದು ಚಿಕಿತ್ಸೆಗಾಗಿ...

ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!

ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಶ್ರೀರಾಮ‌ಸೇನೆಯ ಕಾರ್ಯಕರ್ತರು, ರಾಮನವಮಿ ಅಂಗವಾಗಿ ಸಮಾಜಿಕ ಕಳಕಳಿಯ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹುಬ್ಬಳ್ಳಿಯ ಪ್ರತಿಷ್ಠಿತ ಸೆಕ್ಯೂರ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಮತ್ತು ಹೃದಯ ತಪಾಸಣಾ ಶಿಬಿರ ಏರ್ಪಡಿಸಿದ್ದಾರೆ. ನಾಳೆ ರವಿವಾರ ದಿನಾಂಕ 06.04. 2025 ರಂದು ನಂದಿಕಟ್ಟಾ ಗ್ರಾಮದಲ್ಲಿ ನಡೆಯುವ ಶಿಬಿರದಲ್ಲಿ,ನಾಡಿ ಮಿಡಿತ(ಪಲ್ಸ್), ರಕ್ತದೊತ್ತಡ(ಬಿಪಿ), ಸಕ್ಕರೆ ಖಾಯಿಲೆ(ಶುಗರ್), ಇಸಿಜಿ(ECG) ಇಖೋ(ECHO) ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೀಗಾಗಿ, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಲು ನಂದಿಕಟ್ಟಾ, ಉಗ್ಗಿನಕೇರಿ, ಕೆಂದಲಗೇರಿ ಬಸಾಪುರ ಹಾಗೂ ಹುಲಿಹೊಂಡ ಗ್ರಾಮಗಳ ಸಾರ್ವಜನಿಕರಿಗೆ ಕೋರಲಾಗಿದೆ.

ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!

ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ಪಟ್ಟಣದ ಎಪಿಎಂಸಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಎಳೆದು ತಂದಿದ್ದಾರೆ. ದಾಳಿಯ ವೇಳೆ ಇಬ್ಬರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಉಳಿದ ಎಂಟು ಜನರು ಪರಾರಿಯಾಗಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ದಾಳಿ ಮಾಡಿದ ಪೊಲೀಸರಿಗೆ, ಮುಂಡಗೋಡಿನ ರಾಘವೇಂದ್ರ ರಾಮಚಂದ್ರ ರಾಯ್ಕರ್, ನಿಸ್ಸಾರಾಹ್ಮದ್ ಮದರಸಾಬ ದರ್ಗಾವಾಲೆ ಸಿಕ್ಕಿಬಿದ್ದಿದ್ದಾರೆ‌. ಉಳಿದಂತೆ ಲಾಲಸಾಬ್ ಇಟ್ಟಂಗಿ, ನಾಶೀರ ಬಂಕಾಪೂರ, ರಫೀಕ್ ಭಟ್ಕಳ್, ಅಲ್ಲಾಭಕ್ಷ ಹಿರೇಹಳ್ಳಿ, ಅಕ್ಬರಶಾ ಮೀರಾಶಿ, ಮೌಲಾಲಿ ಜಂಡೆವಾಲೆ, ಸೈಯದ್ ಹುಸೇನ್ ಯಳ್ಳೂರ್, ಇಸ್ಮಾಯಿಲ್ ಹಾನಗಲ್ ಎಂಬುವವರು ಪರಾರಿಯಾಗಿದ್ದು ಅವರ ಮೇಲೆ ಕೇಸು ದಾಖಲಾಗಿದೆ. ಇನ್ನು ದಾಳಿವೇಳೆ 11,500 ರೂ ನಗದು ಸೇರಿದಂತೆ, ಆಟಕ್ಕೆ ಬಳಸಿದ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಮುಂಡಗೋಡ ಸಿಪಿಐ ರಂಗನಾಥ್ ನೀಲಮ್ಮನವರ್ ಮಾರ್ಗದರ್ಶನದಲ್ಲಿ ಕ್ರೈಂ ಪಿಎಸ್ಐ ಹನಮಂತ ಗುಡಗುಂಟಿ ನೇತೃತ್ವದಲ್ಲಿ ಪೇದೆಗಳಾದ ಮಾಂತೇಶ್ ಮುಧೋಳ, ಸಂಜು ರಾಠೋಡ್ , ಕೆಂಚಪ್ಪ ಜಾಲಿಕಟ್ಟಿ, ಬಸವರಾಜ್ ಒಡೆಯರ್, ಅನ್ವರ ಬಮ್ಮಿಗಟ್ಟಿ, ಶಿವಾನಂದ್ ದಾನನ್ನವರ್ ಭಾಗವಹಿಸಿದ್ದರು.

ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ

ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ

ಕಾರವಾರ: ಪ್ರಸ್ತುತ ಬೇಸಿಗೆಗಾಲವಾದ್ದರಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದoತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ವಸತಿ ನಿಲಯಗಳಿಗೆ ಶುದ್ದ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುವುದನ್ನು ಖಾತರಿಪಡಿಸಿಕೊಂಡು ವರದಿ ನೀಡುವಂತೆ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ನೀರಿನ ಅಭಾವ ಇರುವ ಗ್ರಾಮ ಪಂಚಾಯಿತಿಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದ್ದು, ಗ್ರಾಮ ಪಂಚಾಯತ್ ಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುವ ಮುನ್ನ ಪಿಡಿಓ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯ ಸಾಧಿಸಿ ಮಾಹಿತಿಯನ್ನು ಪಡೆದು ವರದಿ ಸಲ್ಲಿಸಬೇಕು. ಈ ವರದಿ...

ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!

ಮುಂಡಗೋಡ; ತಾಲ್ಲೂಕಿನ ಕಲಕೇರಿ ಗ್ರಾಮದ ಶಿವಾಜಿ ವೃತ್ತದಲ್ಲಿ ರವಿವಾರದಂದು ಗೋದುಳಿ ಮುಹೂರ್ತದಲ್ಲಿ ಕಲಕೇರಿ ಗ್ರಾಮದ ಯುವ ಮರಾಠ ಪರಿಷತ್, ಮುಂದಾಳತ್ವದಲ್ಲಿ, ತಾಲೂಕಿನ ಮರಾಠ ಸಮಾಜದ ಮುಖಂಡರ ಹಾಗೂ ಕಲಕೇರಿ, ಹೊನ್ನಿಕೊಪ್ಪ, ಅಂದಲಗಿ. ಗ್ರಾಮದ ಎಲ್ಲ ಸಮಾಜದ ಗುರು ಹಿರಿಯರ ಉಪಸ್ಥಿತಿಯಲ್ಲಿ ಹಿಂದೂ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಅಶ್ವಾರೂಢ ಮೂರ್ತಿಯನ್ನು ಲೋಕಾರ್ಪಣೆ ಮಾಡಲಾಯಿತು. ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ನಡೆದ ಸಭಾ ಕಾರ್ಯಕ್ರಮವನ್ನು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿ.ಎಸ್.ಪಾಟೀಲ್, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ್ರು. ಛತ್ರಪತಿ ಶಿವಾಜಿ ಮಹಾರಾಜರು ಹಿಂದೂ ಧರ್ಮದ ಉಳುವಿಗಾಗಿ ಹೋರಾಡಿದವರು. ಅವರ ಆದರ್ಶ, ತತ್ವ ಸಿದ್ಧಾಂತಗಳನ್ನ ಹಿಂದೂ ಧರ್ಮದ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದುಷ್ಟ ಚಟಗಳಿಂದ ದೂರ ಇದ್ದು, ತಂದೆ ತಾಯಿಗಳಿಗೆ ಒಳ್ಳೆಯ ಮಕ್ಕಳಾಗಬೇಕು ಅವಾಗ ಮಾತ್ರ ಇಂತಹ ಮಹಾನ್ ಪುರುಷರ ಪುತ್ತಳಿ ಅನಾವರಣ ಮಾಡಿರುವುದಕ್ಕೆ ಸಾರ್ಥಕವಾಗುತ್ತದೆ ಎಂದು ಹೇಳಿದರು. ನಂತರ ಮರಾಠ ಸಮಾಜದ ಹಿರಿಯ...

ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ ಜೂನ್ 30ರ ವರೆಗೆ ಸ್ತ್ರೀ ಚೇತನ ಎಂಬ ವಿಶೇಷ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ . ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ ಕನಿಷ್ಠ 55 ಪ್ರತಿಶತದಷ್ಟು ಇರಬೇಕೆಂಬ ನಿಯಮವಿದೆ. ಆದರೆ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ 2024-25ನೇ ಸಾಲಿನಲ್ಲಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆ ಪ್ರಮಾಣ 52.41 ಪ್ರತಿಶತವಿದೆ. ಕೆಲವು ತಾಲೂಕುಗಳಲ್ಲಿ ಈ ಪ್ರಮಾಣ ಉತ್ತಮವಾಗಿದೆ ಆದರೂ ಕೆಲ ತಾಲೂಕುಗಳಲ್ಲಿ ಕಡಿಮೆ ಇರುವುದರಿಂದ ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ನಿರೀಕ್ಚಿತ ಮಟ್ಟದ ಗುರಿ ಸಾಧನೆ ಸಾಧ್ಯವಾಗಿರುವುದಿಲ್ಲ. 2025-26ನೇ ಸಾಲಿನಲ್ಲಿ ಮಹಿಳಾ ಭಾಗವಹಿಸುವಿಕೆ ಪ್ರಮಾಣ ವೃದ್ಧಿಸಲು ವರ್ಷಾರಂಭದಲ್ಲಿಯೇ ಅಭಿಯಾನ ರೂಪಿಸಲಾಗಿದೆ. 50 % ಕ್ಕಿಂತ ಕಡಿಮೆ ಮಹಿಳಾ ಭಾಗವಹಿಸುವಿಕೆ ಪ್ರಮಾಣ ಹೊಂದಿರುವ ತಾಲೂಕುಗಳು ಕನಿಷ್ಠ 10% ಹಾಗೂ 50% ಕ್ಕಿಂತ ಹೆಚ್ಚು ಮಹಿಳಾ ಭಾಗವಹಿಸುವಿಕೆ ಪ್ರಮಾಣ...

ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್

ಮುಂಡಗೋಡ; ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಉಚ್ಚಾಟನೆ ಯಾಕಾಗಿದೆ ಗೊತ್ತಿಲ್ಲ. ಆದರೆ ಇದರ ಪರಿಣಾಮ ಮಾತ್ರ ಇನ್ನು ಎರಡು ಮೂರು ದಿನದಲ್ಲಿ ಗೊತ್ತಾಗಲಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ತಾಲೂಕಿನ ಬಾಚಣಕಿ ಗ್ರಾಮದಲ್ಲಿ ಮನುವಿಕಾಸ ಸಂಸ್ಥೆಯ ವತಿಯಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ. ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವ್ರು ಪ್ರತಿಕ್ರಿಯಿಸಿದರು. ಬಸವನಗೌಡ ಪಾಟೀಲ್ ಉಚ್ಚಾಟನೆ ಅದು ಪಕ್ಷದ ನಿರ್ಣಯ. ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು. ಇನ್ನು ಬಿಜೆಪಿ ನಮ್ಮನ್ನು ಉಚ್ಚಾಟಿಸಲ್ಲ. ಪಕ್ಷ ಏನೇ ನಿರ್ಧರಿಸಿದರೂ ನಾನು ಸ್ವಾಗತಿಸುವೆ. ಶಾಸಕ ಸೋಮಶೇಖರ ಅವರು ಪಕ್ಷವನ್ನು ನಿಜಕ್ಕೂ ಮುಜಗರಕ್ಕೀಡುಮಾಡಿರುವವರ ವಿರುದ್ಧ ಕ್ರಮವಾಗದ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ನೂರಕ್ಕೆ ನೂರಾ ಒಂದರಷ್ಟು ನಿಜ ಎಂದರು. ‘ವಿಧಾನಸಭೆ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಆಯಿತು. ಶಾಸಕರಾದ ಸುನೀಲಕುಮಾರ, ಆರ್.ಅಶೋಕ ಅವರಿಗೆ ಏನೂ ಆಗಲಿಲ್ಲ. ಪಾಪದ ಶಾಸಕರು ಮಾತ್ರ ಅಮಾನತುಗೊಂಡರು. ದೊಡ್ಡ ನಾಯಕರಿಗೆ ಏನೂ...

error: Content is protected !!