ಹುನಗುಂದ ಗ್ರಾಪಂ PDO ಮಂಜುನಾಥ್ ಗೆ  “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಹುನಗುಂದ ಗ್ರಾಪಂ PDO ಮಂಜುನಾಥ್ ಗೆ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಪಿಡಿಒ ಮಂಜುನಾಥ್ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರವಾರ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು, ಮಂಜುನಾಥ ಅವರಿಗೆ ಫೆಬ್ರವರಿ 2025 ಮಾಹೆಯ “ಬೆಸ್ಟ್ ಪಿಡಿಒ ಆಫ್ ದಿ ಮಂತ್” ಪ್ರಶಸ್ತಿ ಪತ್ರ ನೀಡಿ, ಅಭಿನಂದಿಸಿದರು‌. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಕರೀಂ ಅಸದಿ, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಉಪಸ್ಥಿತರಿದ್ದರು.

ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಮಾರ್ಚ್ 9 ರಂದು ರವಿವಾರ ಕಾರವಾರದಲ್ಲಿ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟ..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಮಾರ್ಚ್ 9 ರಂದು ಬೆಳಿಗ್ಗೆ 6 ಗಂಟೆಗೆ ಕಾರವಾರ ರವೀಂದ್ರನಾಥ ಟಾಗೋರ ಕಡಲ ತೀರದಿಂದ ಮಾದಕ ದ್ರವ್ಯ ಹಾಗೂ ಸೈಬರ್ ಅಪರಾಧ ಮುಕ್ತ ಕರ್ನಾಟಕ ” Drugs & Cyber Crime free Karnataka & Fitness for All” ಥೀಮ್‌ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್ 2025ರ ಮ್ಯಾರಾಥಾನ್ 5K ಓಟವನ್ನು ಆಯೋಜಿಸಲಾಗಿದೆ. ಪೊಲೀಸ್ ರನ್ -2025 ರ ಮ್ಯಾರಾಥಾನ್ 5K ಓಟದಲ್ಲಿ ಸಾರ್ವಜನಿಕರು ಕ್ಯೂಆ‌ರ್ ಕೋಡ್ ಸ್ಕ್ಯಾನ್ ಮಾಡಿ ಹೆಸರುಗಳನ್ನು ನೊಂದಾಯಿಸಿ ಕೊಳ್ಳುವುದು ಹಾಗೂ ಮ್ಯಾರಾಥಾನ್ ಓಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ. 5K ಮ್ಯಾರಾಥಾನ್ ಓಟದಲ್ಲಿ ಮೊದಲ 3 ಓಟಗಾರರಿಗೆ ಆಕರ್ಷಕ ನಗದು ಬಹುಮಾನ, ಪದಕ ಹಾಗೂ ಪ್ರಶಸ್ತಿ ಪತ್ರವನ್ನು ಮತ್ತು ಮ್ಯಾರಾಥಾನ್ ಮುಗಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರವನ್ನು ಹಾಗೂ ಪದಕವನ್ನು ನೀಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ನಾರಾಯಣ ಎಂ ತಿಳಿಸಿದ್ದಾರೆ.

ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಪತ್ರಕರ್ತ ಶಿವಶಂಕರ್ ಕೋಲಸಿರ್ಸಿ ಹೃದಯಾಘಾತದಿಂದ ನಿಧನ..!

ಸಿದ್ದಾಪುರ : ಮಾಧ್ಯಮ ಕ್ಷೇತ್ರದಲ್ಲಿ ಕಳೆದ‌ ಎರಡು ದಶಕದಿಂದ‌ ಕಾರ್ಯ‌ ನಿರ್ವಹಿಸುತ್ತಿದ್ದ ಶಿವಶಂಕರ್ ಕೋಲಸಿರ್ಸಿ ಅವರು ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 44 ವರ್ಷ ವಯಸ್ಸಾಗಿದ್ದು, ಅವರು Tv-9, ನ್ಯೂಸ್ ನಲ್ಲಿ ಕೆಲ‌ ವರ್ಷಗಳ‌ ಕಾಲ ಉತ್ತರಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕನ್ನಡ ಜನಾಂತರಂಗ, ಕನ್ನಡ ಪ್ರಭ, ಕರಾವಳಿ ಮುಂಜಾವು ಸೇರಿದಂತೆ ಅನೇಕ ಮಾಧ್ಯಮದಲ್ಲಿ ಕಾರ್ಯ‌ ನಿರ್ವಹಿಸಿದ್ದರು, ಸದ್ಯ ರಾಜ್ ನ್ಯೂಸ್ ‌ನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿನ್ನೆ ಸಹ ವರದಿಗಾರಿಕೆಗೆ ತೆರಳಿದ್ದರು.‌ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡು ಬಂದಿರಲಿಲ್ಲ. ವರದಿಗಾರಿಕೆ ಜೊತೆಗೆ ಬ್ಯಾಂಕ್ ಆಪ್ ಬರೋಡಾದಲ್ಲಿ ಆರ್ಥಿಕ ಸಾಕ್ಷರತೆ ಕೇಂದ್ರದ ಸಮಾಲೋಚಕರಾಗಿ ಕೂಡ ಕೆಲಸ ಮಾಡುತ್ತಿದ್ದರು.. ತಡರಾತ್ರಿ ಏಕಾಏಕಿಯಾಗಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಮುನ್ನವೆ ಶಿವಶಂಕರ್ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಅಪಾರ‌ ಬಂಧು ಬಳಗವನ್ನ ಅಗಲಿದ್ದಾರೆ. ಮೃತರ ನಿಧನಕ್ಕೆ ಸ್ಥಳೀಯ ವರದಿಗಾರರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. ಸ್ಥಳೀಯ...

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಮುಂದಿನ ಎರಡು ದಿನ ಜಿಲ್ಲೆಯಲ್ಲಿ ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ :ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ದಿನಾಂಕ:02.03 2025 ರ ವರದಿಯನ್ವಯ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿಯ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ನಾಗರಿಕರಿಗೆ ಈ ಕೆಳಗೆ ಸೂಚಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ. ಮುನ್ನಚ್ಚರಿಕೆ ಪಾಲಿಸಿ..! ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ ಬೂಟುಗಳು ಅಥವಾ ಚಪ್ಪಲ್ ಗಳನ್ನು ಬಳಸಿ. ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ ನೀವು ಹೊರಗೆ ಕೆಲಸ ಮಾಡುತ್ತಿದ್ದರೆ ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ನಿಲ್ಲಿಸಿದ ವಾಹನಗಳಲ್ಲಿ...

ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..!  ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ ಪರಂಪರೆ. ಸಾಮಾನ್ಯವಾಗಿ ಒಂದು ಸಾರ್ವಜನಿಕ ಉದ್ದೇಶಕ್ಕಾಗಿ ಒಂದುಗೂಡುವಿಕೆಯನ್ನು ಜಾತ್ರೆ ಎಂದು ಹೇಳಬಹುದು. ಪ್ರತಿ ವರ್ಷಗಳಿಗೊಮ್ಮೆ ಸರ್ವತ್ರ ಸುಭಿಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ-ಉತ್ಸವಗಳಿಂದೊಡಗೂಡಿದ ಶ್ರೀ ಲಕ್ಷ್ಮಿ ಜಾತ್ರೆಯನ್ನು ಅತೀ ವಿಜ್ರಂಭಣೆಯಿಂದ ನಡೆಸಲಾಗುತ್ತದೆ. ಇದು ಭೀಮಾ ನದಿ ದಡ ದಲ್ಲಿಯೇ ಅತೀದೊಡ್ಡ ಜಾತ್ರೆ, ಈ ಜಾತ್ರೆಗೆ ನಗರ ಹಳ್ಳಿ ಮೂಲೆ ಮೂಲೆಗಳಿಂದ ಭಕ್ತಸಾಗರ ಹರಿದು ಬರುತ್ತಾರೆ. ಅನೇಕಾನೇಕ ಮನರಂಜನಾ ಕಾರ್ಯಕ್ರಮಗಳು, ಜಾನಪದ ಲಡ್ಡು ಬಾರಕೋಲಿನ ಪ್ರದರ್ಶನಗಳು,...

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

ಟಿಬೇಟಿಯನ್ ಕಾಲೋನಿ ಬಳಿ ಜ. 18 ರಂದು ನಡೆದಿದ್ದ ಕಾರ್ ಮರಕ್ಕೆ ಡಿಕ್ಕಿ, ಉಲ್ಟಾ ಪಲ್ಟಾ ಕೇಸು..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ಬಳಿ ನಡೆದಿದ್ದ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಾರವಾರದ ಸಾಮಾಜಿಕ ಕಾರ್ಯಕರ್ತ ಮಾಧವ ನಾಯ್ಕ್ ಇಡೀ ಪ್ರಕರಣದ ಬಗ್ಗೆ ವಿಸ್ತೃತ ದೂರು ನೀಡಿದ್ದಾರೆ. ಘಟನೆ ನಡೆದದ್ದೇ ಬೇರೆ, ಕೇಸು ದಾಖಲಾಗಿದ್ದೇ ಬೇರೆ, ಇನ್ಶ್ಯೂರನ್ಸ್ ಹಣಕ್ಕಾಗಿ ಇಲ್ಲಿ ಇಡೀ ಕೇಸನ್ನೇ ಉಲ್ಟಾ ಪಲ್ಟಾ ಮಾಡಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಅಲ್ದೇ ಈ‌ ಕುರಿತು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಹೀಗಾಗಿ, ಈ ಕೇಸು ಮುಂಡಗೋಡ ಪೊಲೀಸರಿಗೆ ಬಹುತೇಕ ಉರುಳಾಗೋ ಎಲ್ಲಾ ಸಾಧ್ಯತೆ ಇದೆ. ಮೊನ್ನೆಯಷ್ಟೇ..! ಇನ್ನು, ಇತ್ತೀಚಿಗಷ್ಟೆ ಕೌಟುಂಬಿಕ ವಿವಾದದಲ್ಲಿ ಸದ್ದು ಮಾಡಿದ್ದ ಕಾರವಾರದ ಸೈಬ‌ರ್ ಕ್ರೈಮ್ ವಿಭಾಗದ DySP ಅಶ್ವಿನಿ .ಬಿ ವಿರುದ್ಧ ಅಧಿಕಾರ ದುರುಪಯೋಗ ,ಇನ್ಸುರೆನ್ಸ್ ಕಂಪನಿಗೆ ವಂಚನೆ, ಸುಳ್ಳು ಪ್ರಕರಣ ದಾಖಲಿಸಿರುವ ಕುರಿತು ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. ಇದೇಂತಾ ಸುಳ್ಳು ರೀ..? ಕಾರವಾರದ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯ್ಕ ಎಂಬುವವರು ದೂರು ನೀಡಿದವರಾಗಿದ್ದು ಸೈಬ‌ರ್...

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!

ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ ಮಣ್ಣು ತೆಗೆದು ಸಾಗಾಟ ಮಾಡುತ್ತಿದ್ದರು. ಹೀಗಾಗಿ, ಖಚಿತ ಮಾಹಿತಿ ಸಿಕ್ಕ ಕೂಡಲೇ ಅರಣ್ಯ ರಕ್ಷಕ ಶ್ರೀಕಾಂತ್ ವೇ್ಣೇಕರ್, ಗಸ್ತು ಅರಣ್ಯ ಪಾಲಕ ನಾರಾಯಣ ಸಿಂಗ್ ರಜಪೂತ್ ಹಾಗೂ ಈರಪ್ಪ ಉಗ್ನಿಕೇರಿ ದಾಳಿ ಮಾಡಿ, ಒಂದು ಜೆಸಿಬಿ, ಮತ್ತೆ ಒಂದು ಟ್ರಾಕ್ಟರ್ ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ ಇನ್ನೂ ಹಲವು ಟ್ರ್ಯಾಕ್ಟರ್ ಗಳು ಪರಾರಿಯಾಗಿವೆ.

“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!

“ತುಂಬಿದ ಕೊಡ ತುಳಕೀತಲೇ ಪರಾಕ್” ಪ್ರಸಕ್ತ ವರ್ಷದ ಶ್ರೀಕ್ಷೇತ್ರ ಮೈಲಾರ ಕಾರ್ಣೀಕ ನುಡಿ..!

ಹೂವಿನಹಡಗಲಿ ತಾಲೂಕಿನ ಮೈಲಾರದ ಐತಿಹಾಸಿಕ ಮೈಲಾರಲಿಂಗ ಕಾರ್ಣಿಕದ ಭವಿಷ್ಯವಾಣಿ ಶುಕ್ರವಾರ ಸಂಜೆ ಹೊರಬಿದ್ದಿದೆ, “ತುಂಬಿದಕೊಡ ತುಳುಕಿತಲೇ ಪರಾಕ್” ಎಂಬ ಕಾರ್ಣಿಕವನ್ನು ಗೊರವಪ್ಪ ರಾಮಪ್ಪ ನುಡಿದಿದ್ದು, ಈ ವರ್ಷ ರಾಜ್ಯದಲ್ಲಿ ಮಳೆ – ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ. ಮೈಲಾರದ ಮೈಲಾರ ಲಿಂಗೇಶ್ವರ ಜಾತ್ರೆ ಪ್ರಯುಕ್ತ ಡಂಕನಮರಡಿಯಲ್ಲಿ ಗೊರವಪ್ಪ ಕಾರ್ಣಿಕ ನುಡಿದಿದ್ದಾನೆ. 15ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ, ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ ಕಾರ್ಣಿಕ ನುಡಿದಿದ್ದಾನೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ. ಅತಿವೃಷ್ಟಯಿಂದ ಕಂಗೆಟ್ಟಿದ್ದ ನಾಡಿನ ಜನತೆಗೆ ಮೈಲಾರಲಿಂಗದ ಕಾರ್ಣಿಕ ಸಿಹಿ ಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬರಲಿದೆ. ಇದರಿಂದ ನಾಡಿನ ರೈತರ ಮುಖದಲ್ಲಿ ನಗುವಿನ ಸಿಂಚನ ಮೂಡಿಸುವ ಭರವಸೆ ಸಿಕ್ಕಂತಾಗಿದೆ. ಈ ಹಿನ್ನೆಲೆ ಮೈಲಾರ ಲಿಂಗದ ಕಾರ್ಣಿಕ ರಾಜ್ಯದಲ್ಲಿ ಗಮನ ಸೆಳೆದಿದೆ....

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!

 ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ ನುಜ್ಜು ಗುಜ್ಜಾಗಿದೆ‌. ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿದ್ದಾರೆ.

ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ ಮೃತನ ಮಗಳಾದ ಗಂಗೂಬಾಯಿ ಭಾಗಪ್ಪ ಹರಿಜನ, ಸಾ: ಬಬಲಾದಿ ತಾ: ಇಂಡಿ ರವರು ನೀಡಿದ ದೂರಿನ ಮೇರೆಗೆ ಗಾಂಧಿಚೌಕ ಪೊಲೀಸ್ ಠಾಣೆ ಗುನ್ನೆ ನಂ: 32/2025 ಕಲಂ: 189(2), 191(2), 191(3), 352, 103, 190 ಬಿಎನ್ಎಸ್ ಆ್ಯಕ್ಟ್-2023 ಮತ್ತು 25(ಎ) ಭಾರತೀಯ ಆಯುಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿರುತ್ತದೆ. ಮೃತ ಭಾಗಪ್ಪ ಹುಚ್ಚಪ್ಪ ಹರಿಜನ ಈತನ ಮೇಲೆ 10 ಕ್ಕೂ ಹೆಚ್ಚು...

error: Content is protected !!