IPL RCB vs LSG Match: ಐಪಿಎಲ್ 18ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ತಂಡಗಳು ಪ್ಲೇಆಫ್ಗೆ ಎಂಟ್ರಿ ಪಡೆದಿರುವುದು ಗೊತ್ತೇ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿತ್ತು. ಸದ್ಯ ಇನ್ನೊಂದು ಲೀಗ್ ಪಂದ್ಯ ಬಾಕಿ ಇದೆ. ಇದರ ನಡುವೆಯೇ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳ ಹಿಂದೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಬೆಂಗಳೂರು ತಂಡ ಕೊನೆಯ ಪಂದ್ಯದಲ್ಲಿ ಮೇ27ರಂದು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ವಿರುದ್ಧ ಸೆಣಸಲಿದೆ. ಏತನ್ಮಧ್ಯೆ ಈ ಪಂದ್ಯದಲ್ಲಿ ಬೆಂಗಳೂರು ತಂಡ ಉತ್ತಮ ರನ್ ರೇಟ್ನೊಂದಿಗೆ ಗೆಲುವು ಸಾಧಿಸಿದರೇ ಅಗ್ರ ಎರಡು ಸ್ಥಾನಗಳಲ್ಲಿ ಉಳಿಯಬಹುದಾಗಿದೆ. ಇದರೊಂದಿಗೆ ಪ್ಲೇಆಫ್ ಪಂದ್ಯದಲ್ಲಿ ಗೆಲುವು ಸಾಧಿಸಿದರೇ ನೇರವಾಗಿ ಫೈನಲ್ಗೆ ತಲುಪಲಿದೆ. ಒಂದು ವೇಳೆ ಸೋತರು ಎಲಿಮಿನೇಟರ್ ಪಂದ್ಯ ಆಡುವ ಮತ್ತೊಂದು ಅವಕಾಶ ಇರಲಿದೆ. ಇದಕ್ಕಾಗಿ ತಂಡದ ಆಟಗಾರರು...
Top Stories
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!
ದೇಶದಲ್ಲಿ ಮತ್ತೆ ಕೋವಿಡ್ ಆತಂಕ : ರಾಜ್ಯದಲ್ಲಿ 38 ಕೇಸ್, ಬೆಂಗಳೂರಲ್ಲೇ 32 ಸೋಂಕಿತರು..!
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
ಸಾವಿತ್ರಿಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆಯಿಂದ, ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ..!
ದೆಹಲಿಯಲ್ಲಿ 23 ಕೋರೊನಾ ಕೇಸ್ ಗಳು ವರದಿ; ಭಯ ಬೇಡ, ಸಜ್ಜಾಗಿರಲು ಆಸ್ಪತ್ರೆಗಳಿಗೆ ಸರ್ಕಾರದ ಸೂಚನೆ
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
ಜಿಲ್ಲೆಯಲ್ಲಿನ ಸೇತುವೆಗಳ ದೃಡತೆ ಬಗ್ಗೆ ವರದಿ ನೀಡಿ, ಅನಾಹುತವಾದಲ್ಲಿ ಅಧಿಕಾರಿಗಳೇ ಹೊಣೆ-ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಎಚ್ಚರಿಕೆ..!
ಜಿಲ್ಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ -2025 ರ ಅವಧಿ ವಿಸ್ತರಣೆ..!
ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಮೂಲಕ ಸಮಸ್ಯೆಗಳಿಗೆ ತುರ್ತು ಸ್ಪಂದನೆ, ಮಳೆಯಿಂದ ನಿಮಗೂ ಸಮಸ್ಯೆ ಆದಲ್ಲಿ ತಕ್ಷಣವೇ ಇಲ್ಲಿ ಕರೆ ಮಾಡಿ..!
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ. ಮಗನನ್ನ ಯಾಕೆ ಕರೆದುಕೊಂಡು ಬಂದೀಯಾ ಅಂತಾ ಜಗಳ ಮಾಡಿದ್ದ. ಇದನ್ನೂ ಓದಿ: ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..! ಈತನೊಟ್ಟಿಗೆ ಮೂರು ಜನ ಸೇರಿಕೊಂಡು ಮಹಿಳೆ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ, ಈ ವೇಳೆ ಮಗನನ್ನ ಬಿಟ್ಟು ಓಡಿ ಹೋದ ತಾಯಿ, ಬಳಿಕ ಅಲ್ಲೇ ಇದ್ದ ಕಾರ್ತಿಕ್ ಮೇಲೆ ರಾಕ್ಷಸಿಯ ವರ್ತನೆ ತೋರಿದ ಪಾಪಿಗಳು. ತಲೆಗೆ ಕಟ್ಟಿಗೆಯಿಂದ ಹೊಡೆದು ಬಳಿಕ...
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ ಕಾರ್ಮೋಡ ಕವಿದಿತ್ತು ಎಂದು ನುಡಿದಿದ್ದಾರೆ. ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದ್ದು, ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿ ನಂತರ ಎನಾಗುತ್ತೆ ನೋಡಬೇಕು ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!
Monsoon Alert: ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 ರಲ್ಲಿ (ಮೇ 19 ರಂದು) ಕೇರಳವನ್ನು ತಲುಪಿತು, ಇದು ಸಾಮಾನ್ಯವಾಗಿ ಮುಂಗಾರು ಕೇರಳವನ್ನು ಪ್ರವೇಶಿವುದಕ್ಕಿಂತ 14 ದಿನಗಳ ಮೊದಲು ಆಗಮಿಸಿತ್ತು. ಕಳೆದ ವರ್ಷ ಮೇ 30 ರಂದು; 2023 ರಲ್ಲಿ ಜೂನ್ 8; 2022 ರಲ್ಲಿ ಮೇ 29; 2021 ರಲ್ಲಿ ಜೂನ್ 3; 2020 ರಲ್ಲಿ ಜೂನ್ 1; 2019 ರಲ್ಲಿ ಜೂನ್ 8; ಮತ್ತು 2018 ರಲ್ಲಿ ಮೇ 29 ರಂದು ಕೇರಳವನ್ನು ಮಾನ್ಸೂನ್ ಪ್ರವೇಶಿಸಿತ್ತು ಎಂದು ಐಎಂಡಿ ದತ್ತಾಂಶವು ತೋರಿಸಿದೆ. Monsoon Alert: ನೈಋತ್ಯ ಮಾನ್ಸೂನ್ ಕೇರಳ...
ದೇಶದಲ್ಲಿ ಮತ್ತೆ ಕೋವಿಡ್ ಆತಂಕ : ರಾಜ್ಯದಲ್ಲಿ 38 ಕೇಸ್, ಬೆಂಗಳೂರಲ್ಲೇ 32 ಸೋಂಕಿತರು..!
Covid News: ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ ಆದಂತಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 38 ಮಂದಿಗೆ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರದಲ್ಲೇ 32 ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. Covide News: ತೀವ್ರ ಅನಾರೋಗ್ಯ: ಇದೀಗ ಮೃತಪಟ್ಟಿರುವ ವೃದ್ಧ ವ್ಯಕ್ತಿಗೆ ಬಹು ಅಂಗಾಂಗ ವೈಫಲ್ಯದ ಕಾಯಿಲೆ ಇತ್ತು. ಜತೆಗೆ ನ್ಯುಮೋನಿಯಾ ಸಮಸ್ಯೆಯೂ ತೀವ್ರವಾಗಿತ್ತು. ಅಲ್ಲದೆ ಅಂಗಾಂಗ ವೈಫಲ್ಯ, ಸೆಪ್ಟಿಕ್ ಶಾಕ್ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ 2024ರಲ್ಲಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆದಿತ್ತು. ಏತನ್ಮಧ್ಯೆ, 2019ರಲ್ಲಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆ ನಡೆದಿತ್ತು. ಈ ಸುದ್ದಿನೂ ಓದಿ: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ...
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 26ರಂದು ಹಾಸನ, ಬೆಳಗಾವಿ, ಧಾರವಾಡ ಜಿಲ್ಲೆಗೆ ಆರೆಂಜ್ ಹಾಗೂ ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 27ರಂದು ಕೆಲ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ...
ಮುಂಡಗೋಡಲ್ಲಿ ಮೊಳಗಿದ ದೇಶ ಭಕ್ತಿಯ ಘೋಷವಾಕ್ಯ..! “ಆಪರೇಷನ್ ಸಿಂಧೂರ” ವೀರ ಸೈನಿಕರಿಗೆ ಗೌರವದ ಬೆಂಬಲ..!
Mundgod News:”ಆಪರೇಷನ್ ಸಿಂಧೂರ”ನಲ್ಲಿ ಭಾರತೀಯ ಸೈನಿಕರು ತೋರಿದ ಅಪ್ರತಿಮ ಹೋರಾಟವನ್ನು ಬೆಂಬಲಿಸಿ ಮುಂಡಗೋಡ ಪಟ್ಟಣದಲ್ಲಿ ಜಾತ್ಯಾತೀತವಾಗಿ “ತಿರಂಗಾ ಯಾತ್ರೆ” ನಡೆಯಿತು. ಪಟ್ಟಣದ ಹಳೂರಿನ ಶ್ರೀಮಾರಿಕಾಂಬಾ ದೇವಸ್ಥಾನದಿಂದ ಬೃಹತ್ ರಾಷ್ಟ್ರಧ್ವಜದೊಂದಿಗೆ ಯಾತ್ರೆ ಹೊರಟು, ಶಿವಾಜಿ ಸರ್ಕಲ್ ಬಳಿ ಬಂದು ಸೇರುತ್ತಿದೆ. ಯಾತ್ರೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಹಾಗೂ ಸೈನಿಕರ ಪರ ಜಯಘೋಷಗಳನ್ನು ಕೂಗಿ ಬೆಂಬಲಿಸಿದ್ರು.
ಕಾರವಾರ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ : ಪದಾಧಿಕಾರಿಗಳ ಅವಿರೋಧ ಆಯ್ಕೆ
ಕಾರವಾರ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಾರವಾರ ತಾಲೂಕಾ ಘಟಕದ ಕಾರ್ಯನಿರತ ಪತ್ರಕರ್ತರ ನೂತನ ಸಂಘದ ಪದಾಧಿಕಾರಿಗಳ ಆಯ್ಕೆಯನ್ನ ಪತ್ರಿಕಾಭವನದಲ್ಲಿ ನಡೆಸಲಾಗಿದ್ದು, ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ಪವರ್ ಟಿವಿ ಜಿಲ್ಲಾ ವರದಿಗಾರ ಉದಯ ಬರ್ಗಿ, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಜಿಲ್ಲಾ ವರದಿಗಾರ ಪ್ರಮೋದ ಹರಿಕಂತ್ರ, ಕಾರ್ಯದರ್ಶಿಯಾಗಿ ನ್ಯೂಸ್ 18 ಜಿಲ್ಲಾ ವರದಿಗಾರ ದರ್ಶನ ನಾಯ್ಕ, ಖಜಾಂಚಿಯಾಗಿ ಸುವರ್ಣವಾಹಿನಿ ಜಿಲ್ಲಾ ವರದಿಗಾರ ಭರತರಾಜ್ ಕಲ್ಲಡಕ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ನಾಗರಾಜ್ ಹರಪನಹಳ್ಳಿ, ದೀಪಕ್ ಕುಮಾರ್ ಶೆಣ್ವಿ, ದೀಪಕ್ ಗೋಕರ್ಣ, ಗಿರೀಶ್ ನಾಯ್ಕ ಬಾಡ, ಗಣೇಶ್ ಹೆಗಡೆ, ಪ್ರವೀಣ್ , ಗೌತಮ್ ಬಾಡಕರ್, ಗಿರೀಶ್ ಬಾಂದೇಕರ್, ಕಿಶನ್, ಸುರೇಂದ್ರ ಕಲ್ಗುಟಕರ್, ದೀಪಕ್ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
IPL 2025 RCB vs SRH Match: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ 42 ರನ್‌ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್ಸಿಬಿಯ ಕನಸನ್ನು ಭಗ್ನಗೊಳಿಸಿದೆ. ಏಕಾನ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆರೆಂಜ್ ಆರ್ಮಿ, ಇಶನ್ ಕಿಶನ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಸಹಯಾದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಬಾರಿಸಿತು. ಇದಕ್ಕುತ್ತರವಾಗಿ ಬೆಂಗಳೂರು ತಂಡ 189 ರನ್ ಗಳಿಸಲಷ್ಟೇ ಶಕ್ತವಾಯಿತು. ಬೃಹತ್ ಸ್ಕೋರ್ ಬೆನ್ನಟ್ಟಿದ ಬೆಂಗಳೂರು ಉತಮ್ಮ ಆರಂಭವನ್ನು ಪಡೆದಿತ್ತು. ಆರಂಭಿಕ ಬ್ಯಾಟರ್ಗಳಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಪವರ್ಪ್ಲೇನಲ್ಲಿ ಹೈದರಾಬಾದ್ ಬೌಲರ್ಗಳ ಮೇಲೆ ಸವಾರಿ ಮಾಡಿದರು. ಆದರೇ ಕೊಹ್ಲಿ 43 ರನ್ಗಳಿಸಿದ್ದ ವೇಳೆ ಕ್ಯಾಚೌಟ್ ಆಗಿ ಪೆವಿಲಿಯನ್ ಸೇರಿದರು. ಇಲ್ಲಿಂದ ಆರ್ಸಿಬಿ ಪತನ ಆರಂಭವಾಯಿತ. ಬಳಿಕ ಬಂದ ಮಯಾಂಕ್ ಅಗರ್ವಾಲ್ 11ರನ್...