ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!

ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಚರಂಡಿ ಹೂಳಿನ ಸಮಸ್ಯೆಯಿಂದ ಜನವಸತಿ ಪ್ರದೇಶಗಳಲ್ಲಿ ಹಾಗೂ ಸಂಬಂದಪಟ್ಟ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗದoತೆ ಮುನ್ನೆಚ್ಚರ ವಹಿಸಿ ಎಂದರು. ಶಾಲೆ, ಅಂಗನವಾಡಿಗಳ ಸುತ್ತ..! ಶಾಲೆ ,ಅಂಗನವಾಡಿ ಮತ್ತು ರಸ್ತೆ ಬದಿಯಲ್ಲಿರುವ ಅಪಾಯಕಾರಿಗಳನ್ನು ಗುರುತಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು, ಮಾಲ್ಕಿ ಜಮೀನಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಮೂಲಕ ಆ ಸ್ಥಳಗಳ ಮಾಲೀಕರಿಗೆ ಅನುಮತಿ ನೀಡುವಂತೆ ತಿಳಿಸಿದ ಅವರು ಸಿಡಿಲಿನಿಂದ...

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು ಯಾರೋ ಕಡಿದು, ನಾಶ ಪಡಿಸಿ ಹೋಗಿದ್ದಾರೆ. ಹೀಗಾಗಿ, ಈ‌ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!

ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!

ಕಾರವಾರ: ಯುದ್ಧದಂತ ಸಂದರ್ಭಗಳಲ್ಲಿ ಉಂಟಾಗುವ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸುವ ಬಗ್ಗೆ ಸ್ವಯಂ ಸೇವಕರ ಅಗತ್ಯವಿರುವುದರಿಂದ ಸಿವಿಲ್ ಡಿಫೆನ್ಸ್ ಆಕ್ಟ್-1968 ರಂತೆ ಪ್ರತಿ ನೂರು ನಾಗರಿಕರಿಗೆ ಒಬ್ಬರಂತೆ ಪೌರರಕ್ಷಣಾ ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು. ಜಿಲ್ಲೆಯ ಆಸಕ್ತ ಅರ್ಹ ಅಭ್ಯರ್ಥಿಗಳು ಮೇ.9 ರಿಂದ ಜೂನ್.9 ರವರೆಗೆ ನಿಗದಿತ ಅರ್ಜಿ ನಮೂನೆ ತುಂಬಿ ನೇಮಕಾತಿಯಲ್ಲಿ ಭಾಗವಹಿಸಬಹುದಾಗಿದೆ. ಈ ಕುರಿತ ಅರ್ಜಿಯನ್ನು ಗೃಹರಕ್ಷಕದಳ ಜಿಲ್ಲಾ ಸಮಾದೇಷ್ಟರ ಕಚೇರಿ, ದಿವೇಕರ ಕಾಮರ್ಸ್ ಕಾಲೇಜ್ ಎದುರು, ಕೋಡಿಭಾಗ ಕಾರವಾರ ಅಥವಾ hgcd.karnataka.gov.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4ನೇ ತರಗತಿ ಉತ್ತೀರ್ಣರಾಗಿರಬೇಕು. 18 ವರ್ಷ ಮೇಲ್ಪಟ್ಟಿರಬೇಕು. ದೈಹಿಕವಾಗಿ ಸಧೃಡರಾಗಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಪ್ರತಿ ಮತ್ತು ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರತಿಯನ್ನು ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ಕಾರವಾರ ದೂರವಾಣಿ ಸಂಖ್ಯೆ:08382-200137 ಅಥವಾ 9110683910 ನ್ನು ಸಂಪರ್ಕಿಸುವoತೆ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆoಟ್ ಸಂಜು ಟಿ ನಾಯಕ...

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!

ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ ರೇಗಾಡಿದ್ದರು. ಹೀಗಾಗಿ, ಭದ್ರತಾ ಲೋಪದ ಕಾರಣ ಕೊಟ್ಟು ಸೇವೆಯಿಂದ ಸಿಪಿಐಯವರನ್ನು ಕಮೀಷನರ್ ಅಮಾನತ್ತು ಮಾಡಿದ್ದಾರೆ. ಅಂದಹಾಗೆ, ಈಗಾಗಲೇ ಇದೇ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿತ್ತು. ಈಗ ಭದ್ರತಾ ಲೋಪ ಹಿನ್ನೆಲೆ ಸಿಪಿಐ ಅಲ್ತಾಪ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.

ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!

ಹಾವೇರಿ: ಬ್ಯಾಡಗಿ ತಾಲೂಕಿ‌ನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ‌. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ‌ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ‌ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್...

ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್  ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!

ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!

ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.  

ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!

ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ, ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈ ತಿಂಗಳಲ್ಲಿ ಸೋಲಾರ ಟೆಕ್ನೀಶಿಯನ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ.25 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶ್ವಸಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ...

ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!

ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಣಿಜ್ಯ ಬಳಕೆಯ ಅನಿಲ ಸಿಲೆಂಡರ್‌ಗಳಿಗಿಂತ ಕಡಿಮೆ ದರದಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ಸಿಲೆಂಡರ್‌ಗಳನ್ನು ವಿತರಿಸಲಾಗುತ್ತಿದ್ದು, ಈ ಸಿಲೆಂಡರ್‌ಗಳು ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಕೆಲವು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದು ಇಂತಹ ಪ್ರದೇಶಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಮತ್ತು ಗ್ಯಾಸ್ ಏಜೆನ್ಸಿಗಳ ಅನಿಲ ವಿತರಣೆಯ ದಾಖಲೆಗಳನ್ನು ಹಾಗೂ ವಾಣಿಜ್ಯ ಅನಿಲ ಬಳಕೆದಾರರ ಅನಿಲ ಬಳಕೆಯ ಮಾಹಿತಿ ದಾಖಲೆಗಳನ್ನು ಪರಿಶೀಲನೆ ನಡೆಸುವಂತೆ ತಿಳಿಸಿದರು. ಪಡಿತರ ಚೀಟಗಳಿಗೆ ಇ ಕೆವೈಸಿ ಮಾಡುವ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೆ 98.02 ಪ್ರಗತಿ ಸಾಧಿಸಿದ್ದು, ಈ ಕಾರ್ಯದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಇದುವರೆಗೆ ಇ ಕೆವೈಸಿ ಮಾಡಿಸದೇ ಇರುವವರಿಗೆ ಅಂತಿಮ ದಿನಾಂಕವನ್ನು ನಿಗಧಿಪಡಿಸಿ, ನೊಟೀಸ್ ನೀಡುವಂತೆ...

error: Content is protected !!