Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Top Stories
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್‌ಗೆ 5 ಕಾರಣಗಳು!
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ..! ಗದ್ದಾರ್ ಗಳು ಅಂದ್ರೆ ಇವ್ರೇ ಅಲ್ವಾ..?
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!
Hescom News; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ವ್ಯತ್ಯಯ ಮತ್ತು ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತಂತೆ ಜಿಲ್ಲೆಯ ಹೆಸ್ಕಾಂ ವಿಭಾಗದ ವತಿಯಿಂದ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಳೆಗಾಲದ ಸಮಯದಲ್ಲಿ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಶಿರಸಿ, ದಾಂಡೇಲಿ, ಕಾರವಾರ ಮತ್ತು ಹೊನ್ನಾವರ ಉಪ ವಿಭಾಗಗಳಲ್ಲಿ ವಿದ್ಯುತ್ ತಂತಿಗಳ ಮೇಲಿನ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ. ಶಿರಸಿ ವಿಭಾಗದಲ್ಲಿ 30 ಬ್ಯಾಚ್ ಗಳಲ್ಲಿ 300 ಮಂದಿ ಕಾರ್ಮಿಕರು, ದಾಡೇಲಿ ವಿಭಾಗದಲ್ಲಿ 5 ಬ್ಯಾಚ್ ನಲ್ಲಿ 50, ಕಾರವಾರ ವಿಭಾಗದಲ್ಲಿ 11 ಬ್ಯಾಚ್ ನಲ್ಲಿ 103 , ಹೊನ್ನಾವರದಲ್ಲಿ 18 ಬ್ಯಾಚ್ ನಲ್ಲಿ 144 ಸೇರಿದಂತೆ ಒಟ್ಟು 64 ಬ್ಯಾಚ್ ಗಳಲ್ಲಿ 597 ಗುತ್ತಿಗೆ ಕಾರ್ಮಿಕರನ್ನು ಮಾನ್ಸೂನ್ ಅವಧಿಯಲ್ಲಿ ಕಾರ್ಯನಿರ್ವಹಿಸಲು ನೇಮಿಸಿಕೊಳ್ಳಲಾಗಿದೆ....
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್‌ಗೆ 5 ಕಾರಣಗಳು!
Stock Market Down Today : ಭಾರತೀಯ ಷೇರು ಮಾರುಕಟ್ಟೆ ಮಂಗಳವಾರ ಅಂದ್ರೆ ಮೇ 20 ರಂದು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ನಷ್ಟ ಅನುಭವಿಸಿವೆ. ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು ₹5 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇದ್ದ ನಿರೀಕ್ಷೆಗಳು ಕಡಿಮೆಯಾಗಿವೆ. ಮಾರುಕಟ್ಟೆಯ ಮೌಲ್ಯ ಹೆಚ್ಚಿರುವುದು, ಅಮೆರಿಕದ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿರುವುದು, ಮಾರುಕಟ್ಟೆ ಕುಸಿತಕ್ಕೆ ಮುಖ್ಯ ಕಾರಣಗಳಾಗಿವೆ.ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 873 ಪಾಯಿಂಟ್‌ಗಳಷ್ಟು ಕುಸಿದು 81,186.44 ಕ್ಕೆ ತಲುಪಿದೆ. ನಿಫ್ಟಿ 50 ಕೂಡ 262 ಪಾಯಿಂಟ್‌ಗಳಷ್ಟು ನಷ್ಟವಾಗಿ 24,683.90 ಕ್ಕೆ ಸ್ಥಿರವಾಗಿದೆ. ಜಾಗತಿಕ ಮಾರುಕಟ್ಟೆಗಳಲ್ಲಿನ ಏರಿಳಿತಗಳು ಭಾರತದ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿವೆ.ಸೆನ್ಸೆಕ್ಸ್ ದಿನದ ಆರಂಭದಲ್ಲಿ 82,116.17 ರಲ್ಲಿ ಪ್ರಾರಂಭವಾಯಿತು. ಹಿಂದಿನ ದಿನದ ಮುಕ್ತಾಯದ ಬೆಲೆ 82,059.42 ಆಗಿತ್ತು. ದಿನದ ವಹಿವಾಟಿನಲ್ಲಿ 906 ಪಾಯಿಂಟ್‌ಗಳಷ್ಟು ಕುಸಿದು 81,153.70 ಕ್ಕೆ ತಲುಪಿತು. ನಿಫ್ಟಿ 50 ಕೂಡ 24,996.20 ರಲ್ಲಿ ಪ್ರಾರಂಭವಾಗಿ...
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!
4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ ಬೇಡಿಕೆ ಹೆಚ್ಚಿನ ಮಟ್ಟದಲ್ಲೇ ಇರುತ್ತದೆ. ಆ ದರೆ, ಚಿನ್ನದ ಬೆಲೆ ಇತ್ತೀಚೆಗೆ ತೀವ್ರ ಏರಿಳಿತಕ್ಕೆ ಒಳಗಾಗುತ್ತಿದೆ. ನಿನ್ನೆ ಸೋಮವಾರ ಏರಿಕೆ ದಾಖಲಿಸಿದ್ದ ಬಂಗಾರದ ಬೆಲೆಗಳು, ಇಂದು ಮಂಗಳವಾರ ದಿಢೀರ್ ಕುಸಿತ ಕಂಡಿದೆ. ಕಳೆದ 10 ದಿನಗಳಲ್ಲಿ ಸರಾಸರಿ ಚಿನ್ನದ ಬೆಲೆಗಳು ಇಳಿಕೆಯಾಗಿವೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ. ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ...
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಹೀಗಾಗಿ, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಕುಮಟಾದಲ್ಲಿ ಕಳೆದ ಮೂರು ಗಂಟೆಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಯ ಪಕ್ಕದ ಚರಂಡಿ ಬ್ಲಾಕ್ ಆಗಿದ್ದು , ನೀರು ಸರಾಗವಾಗಿ ಹೋಗದೇ ರಸ್ತೆ ಮೇಲೆ ನೀರು ಹರಿಯುತ್ತಿದೆ. ಈ ಭಾಗದ ವಾಲ್ಗಳ್ಳಿಯ ಬಳಿ ಮನೆ ಜಮೀನುಗಳಿಗೆ ನೀರು ನುಗ್ಗುವ ಆತಂಕ ತಂದೊಡ್ಡಿದೆ. ಇನ್ನು ಕುಮಟಾ -ಸಿದ್ದಾಪುರ ರಸ್ತೆ ನೀರು...
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!
Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಅಂತಾ ಮುನ್ಸೂಚನೆ ನೀಡಲಾಗಿದೆ. ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..! ಹೀಗಾಗಿ, ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ. ದಟ್ಟಣೆ. ದುರ್ಬಲ ಸಂಚಾರ ಮರದ ಕೊಂಬೆಗಳನ್ನು ಕಿತ್ತುಹಾಕುವ ಸಾಧ್ಯತೆಯಿದೆ ಮನೆಯೊಳಗೆ ಇರಿ ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ ಅಂತಾ ಸೂಚಿಸಿರೋ...
ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ
Suhas Shetty Murder Case: ಮಂಗಳೂರು: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೈಲಿನ ಕೈದಿಗಳಿಂದ ಹಲ್ಲೆಗೆ ಯತ್ನ ನಡೆದಿದೆ ಎಂದು ವರದಿಯಾಗಿದೆ. ಚೊಟ್ಟೆ ನೌಷಾದ್‌ನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಸುಹಾಸ ಶೆಟ್ಟಿಯ ಹತ್ಯೆ ಪ್ರಕರಣವು ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಉದ್ವಿಗ್ನತೆಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಚೊಟ್ಟೆ ನೌಷಾದ್ ಪ್ರಮುಖ ಆರೋಪಿಯಾಗಿದ್ದು, ಈತನ ವಿರುದ್ಧ ಕೊಲೆ, ಒಳಸಂಚು, ಮತ್ತು ಇತರ ಗಂಭೀರ ಆರೋಪಗಳಿವೆ. Suhas Shetty Murder Case: ನೌಷಾದ್‌ನನ್ನು ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಆದರೆ, ಜೈಲಿನ ಒಳಗಿನ ಭದ್ರತೆ ಮತ್ತು ಇತರ ಕಾರಣಗಳಿಂದಾಗಿ, ಈತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ಈ...
ಭೀಕರ ಮಳೆಗೆ ಬೆಂಗಳೂರಲ್ಲಿ ಬಾಲಕ ಸೇರಿ ಮೂವರು ಬಲಿ..! 24 ಗಂಟೆಯಲ್ಲಿ 10.4 ಸೆಂ.ಮೀ. ಮಳೆ ದಾಖಲು..!
Banglore Rain problem News: ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. 63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ ಹಂತದ ಮಧುವನ್ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಸಂಜೆ 6.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಳೆಗೆ ಸಂಬಂಧಿಸಿದ ಮತ್ತೊಂದು ಘಟನೆಯಲ್ಲಿ, ಗೋಡೆ ಕುಸಿದು 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಸುಮಾರು 10.4 ಸೆಂ.ಮೀ. ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡು ಸಂಚಾರ ದಟ್ಟಣೆಗೆ ಕಾರಣವಾಯಿತು. ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ...