ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ ಮುಂಚಿನ ಆಗಮನವಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ದೇಶದ $4 ಟ್ರಿಲಿಯನ್ ಆರ್ಥಿಕತೆಯ ಜೀವನಾಡಿಯಾದ ಮಾನ್ಸೂನ್, ಭಾರತಕ್ಕೆ ಕೃಷಿಭೂಮಿಗೆ ನೀರುಣಿಸಲು ಮತ್ತು ಜಲಚರಗಳು ಮತ್ತು ಜಲಾಶಯಗಳನ್ನು ಮರುಪೂರಣ ಮಾಡಲು ಅಗತ್ಯವಿರುವ ಮಳೆಯ ಸುಮಾರು 70%ರಷ್ಟನ್ನು ನೀಡುತ್ತದೆ. ಯಾವುದೇ ನೀರಾವರಿ ಸೌಲಭ್ಯವಿಲ್ಲದೆ, ಭಾರತದ ಕೃಷಿಭೂಮಿಯ ಸುಮಾರು ಅರ್ಧದಷ್ಟು, ಹಲವಾರು ಬೆಳೆಗಳನ್ನು ಬೆಳೆಯಲು ಜೂನ್-ಸೆಪ್ಟೆಂಬರ್ ಮಳೆ ನೈಋತ್ವ ಮಾನ್ಸೂನ್ ಅನ್ನು ಅವಲಂಬಿಸಿದೆ. ಕರ್ನಾಟಕದ 12ಕ್ಕೂ ಹೆಚ್ಚು...
Top Stories
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಮೇ 17 ರವರೆಗೂ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,...
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು ವರ್ಷಗಳಿಂದ ರಾಕೇಶ್ ಪೂಜಾರಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನಿಂದ ರಾಕೇಶ್ ಪೂಜಾರಿ ಕನ್ನಡಿಗರ ಮನೆ ಮಾತಾದರು. ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿ, ವಿವಿಧ ಅವತಾರಗಳನ್ನ ತಾಳಿ ಕನ್ನಡ ವೀಕ್ಷಕರನ್ನ ನಗೆಗಡಲಲ್ಲಿ ತೇಲಿಸಿದವರು ರಾಕೇಶ್ ಪೂಜಾರಿ. ಕನ್ನಡಿಗರು ಹಾಗೂ ತೀರ್ಪುಗಾರರ ಮನಗೆದ್ದ ರಾಕೇಶ್ ಪೂಜಾರಿ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ಕಾರ್ಯಕ್ರಮದಲ್ಲಿ ವಿನ್ನರ್ ಆದರು. ಅಂದು ರಾಕೇಶ್...
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ ಹಲವಾರು ನಗರಗಳಲ್ಲಿ ಡ್ರೋನ್ಗಳು, ಮಾನವ ರಹಿತ ವೈಮಾನಿಕ ವಿಮಾನಗಳು (UAVS) ಮತ್ತು ಮಾನವರಹಿತ ಯುದ್ಧ ವೈಮಾನಿಕ ವಾಹನ (UCAVS) ಮೂಲಕ ಪಾಕಿಸ್ತಾನ ಸೇನೆಯು ದಾಳಿಗೆ ಯತ್ನಿಸಿತು. ಮೇ 7 ರಂದು ಮಾನವ ರಹಿತ ವೈಮಾನಿಕ ವಿಮಾನ (UAV) ಗಳನ್ನು ನಿಯೋಜಿಸಿದ್ದ ಪಾಕಿಸ್ತಾನ ನಂತರದ ದಿನಗಳಲ್ಲಿ ಅವುಗಳ ಸಂಖ್ಯೆಯನ್ನು ಕಡಿಮೆ ಮಾಡಿತ್ತು. ನಾಗರಿಕರಿಗೆ ಕಿರುಕುಳ ನೀಡಲು ಸೇನೆಯು ಹೆಲಿಕಾಪ್ಟರ್ ಮೂಲಕ ದಾಳಿ ನಡೆಸಿತ್ತು ಎಂದು...
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಎಂದು ಸರ್ಕಾರವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸಿತು. ಭಾರತೀಯ ಸಶಸ್ತ್ರ ಪಡೆಗಳು ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಸಂಘಟಿತ ನಿಖರ ಕ್ಷಿಪಣಿ ದಾಳಿಗಳನ್ನು ನಡೆಸಿದವು – ಪಾಕಿಸ್ತಾನದಲ್ಲಿ ನಾಲ್ಕು (ಬಹವಾಲ್ಪುರ್ ಮತ್ತು ಮುರಿಡ್ಕೆ ಸೇರಿದಂತೆ) ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಐದು (ಮುಜಫರಾಬಾದ್ ಮತ್ತು ಕೋಟ್ಲಿಯಂತಹವು) ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಲಾಯಿತು. “ನೀವು ಪಾಕಿಸ್ತಾನದಲ್ಲಿ ಎಲ್ಲೇ ಇದ್ದರೂ, ನಾವು ನಿಮ್ಮನ್ನು ಹೊಡೆಯುತ್ತೇವೆ ಎಂಬ ಸಂದೇಶವನ್ನು ಕಳುಹಿಸಲಾಗಿದೆ. ಈ ಸಂದರ್ಭದಲ್ಲಿ, ನಾವು ಕಾಲಾಳುಗಳ ಹಿಂದೆ...
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಹಿಂತಿರುಗಿಸುವಿಕೆ. ಇದನ್ನು ಹೊರತುಪಡಿಸಿ ಮಾತನಾಡಲು ನಮಗೆ ಏನೂ ಇಲ್ಲ. ಪಾಕಿಸ್ತಾನದವರು ಭಯೋತ್ಪಾದಕರನ್ನು ನಮಗೆ ಹಸ್ತಾಂತರಿಸುವ ಬಗ್ಗೆ ಮಾತನಾಡಿದರೆ ನಾವು ಮಾತನಾಡಬಹುದು. ನಮಗೆಯಾರ ಮಧ್ಯಸ್ಥಿಕೆಯೂ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ. ನಾವು ಹೊಸ ಸಾಮಾನ್ಯ ಸ್ಥಿತಿಯಲ್ಲಿದ್ದೇವೆ. ಅದಕ್ಕಾಗಿಯೇ ನಾವು ‘ಅರ್ಥಮಾಡಿಕೊಳ್ಳುವುದು’ ಮತ್ತು ಗುಂಡಿನ ದಾಳಿಯನ್ನು ನಿಲ್ಲಿಸುವಂತಹ ಪದಗಳನ್ನು ಬಳಸುತ್ತಿದ್ದೇವೆ. ಜಗತ್ತು ಇದನ್ನು ಒಪ್ಪಿಕೊಳ್ಳಬೇಕು. ಪಾಕಿಸ್ತಾನ...
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಹುಬ್ಬಳ್ಳಿ: ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಭಾರತ ಕೊಡುತ್ತದೆ ಎಂದು ನಂಬಿದ್ದೇವು. ಆದರೆ ಈಗ ಏಕಾಏಕಿ ಕದನ ವಿರಾಮ ಆಗಿರುವುದು ನಿಜಕ್ಕೂ ನಮಗೆ ನೋವನ್ನು ತಂದಿದೆ. ಈ ನಿರ್ಧಾರ ಕೈ ಬಿಟ್ಟು ಪಾಪಿ ಪಾಕಿಸ್ತಾನ ನಿರ್ನಾಮ ಮಾಡಬೇಕು ಎಂದು ಆಗ್ರಹಿಸಿದರು. ಡೋನಾಲ್ಡ್ ಟ್ರಂಪ್ ಯಾರ ರೀ ಅವರು..? ನಮ್ಮ ನೋವು ಅವರಿಗೆ ಏನು ಗೊತ್ತು. ನಮ್ಮ ಭಾರತದ ಪ್ರತಿಕಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ, ಮಧ್ಯಸ್ಥಿಕೆ ವಹಿಸುವ ದೊಡ್ಡಸ್ಥಿಕೆ ಮಾಡುವ ಅವಶ್ಯಕತೆ ಏನಿತ್ತು..? ಎಂದು...
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ ಬೈಕ್ ಸವಾರನನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಕಾರವಾರ: ಮುಂಬರುವ ಮಳೆಗಾಲದಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಅವಘಡಗಳು ಸಂಭವಿಸದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಯಾವುದೇ ಜೀವಹಾನಿಯಾಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು, ಹೊಸದಾಗಿ ನಿರ್ಮಾಣ ಹಂತದಲ್ಲಿರುವ ಚರಂಡಿ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು, ಚರಂಡಿ ಹೂಳಿನ ಸಮಸ್ಯೆಯಿಂದ ಜನವಸತಿ ಪ್ರದೇಶಗಳಲ್ಲಿ ಹಾಗೂ ಸಂಬಂದಪಟ್ಟ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗದoತೆ ಮುನ್ನೆಚ್ಚರ ವಹಿಸಿ ಎಂದರು. ಶಾಲೆ, ಅಂಗನವಾಡಿಗಳ ಸುತ್ತ..! ಶಾಲೆ ,ಅಂಗನವಾಡಿ ಮತ್ತು ರಸ್ತೆ ಬದಿಯಲ್ಲಿರುವ ಅಪಾಯಕಾರಿಗಳನ್ನು ಗುರುತಿಸಿ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು, ಮಾಲ್ಕಿ ಜಮೀನಿನಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಮೂಲಕ ಆ ಸ್ಥಳಗಳ ಮಾಲೀಕರಿಗೆ ಅನುಮತಿ ನೀಡುವಂತೆ ತಿಳಿಸಿದ ಅವರು ಸಿಡಿಲಿನಿಂದ...