ಕಾರವಾರ: ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಶನಿವಾರ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಂಡೋಸಲ್ಫಾನ್ ಪೀಡಿತರಿಗೆ ಖಾಸಗಿ ಸಂಸ್ಥೆಯ ವತಿಯಿಂದ ನಿಯಮಿತವಾಗಿ ಔಷಧಗಳು ದೊರೆಯುತ್ತಿಲ್ಲ ಎಂದ ಸಮಸ್ಯೆಯ ಕುರಿತಂತೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತರನ್ನು ಗುರುತಿಸಿ, ಅವರಿಗೆ ವಿಶೇಷ ಶಿಬಿರಗಳನ್ನು ಮಾಡಿ ಚಿಕಿತ್ಸೆ ಮಾಡಲಾಗಿದೆ. ಸರ್ಕಾರದಿಂದ ಒಂದು ಸಂಸ್ಥೆಗೆ ಔಷಧ, ಆಹಾರ ಕಿಟ್ ಗಳನ್ನು ವಿತರಿಸಲು ಸೂಚಿಸಲಾಗಿದ್ದು, ಒಂದು ವೇಳೆ ಆ ಸಂಸ್ಥೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ಸರಿಯಾಗಿ ಔಷಧ ಮತ್ತು ಆಹಾರ ಕಿಟ್ ವಿತರಿಸದೇ ಇದ್ದರೆ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಂತ್ರಸ್ತರಿಗೆ ಸರ್ಕಾರದಿಂದ ದೊರೆಯುವ 4 ಸಾವಿರ ಮಾಶಾಸನ ಸರಿಯಾದ ಸಮಯಕ್ಕೆ...
Top Stories
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್..!
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ..!
ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?
ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ: ಗಣಪತಿ ಉಳ್ವೇಕರ
ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್ ನಿವೃತ್ತ ಏರ್ ಮಾರ್ಷಲ್..!
ಪ.ಜಾತಿ ಒಳ ಮೀಸಲಾತಿ ಸಮೀಕ್ಷೆ: ಅವಧಿ ವಿಸ್ತರಣೆ
ಜಿಲ್ಲೆಯಲ್ಲಿ “ಮುಂಗಾರು” ಸಮಸ್ಯೆಗಳನ್ನು ಎದುರಿಸಲು 24×7 ಸಿದ್ದವಾಗಿರಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಳ್ಳತನವಾಗಿದ್ದ ಬೈಕ್ ಪತ್ತೆ ಹಚ್ಚಿದ ಮುಂಡಗೋಡ ಪೊಲೀಸರು..! ಅಯ್ಯೊ ತಮ್ಮಾ ವಯಸ್ಸಲ್ಲದ ವಯಸ್ಸಲ್ಲಿ ಇಂತಾ ಕೆಲಸಾ ಬೇಕಿತ್ತಾ..?
ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?
ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು..!
ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಪರವಾಗಿ ನಾನಿದ್ದೇನೆ; ಸಚಿವ ಮಂಕಾಳ ವೈದ್ಯ ಹೇಳಿಕೆ..!
ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಬಗ್ಗೆ ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ, ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಿ, ಸರಕಾರದಿಂದ ದೊರೆಯುವು ಸೌಲಭ್ಯಗಳನ್ನು ಮಂಜೂರು ಮಾಡಬೇಕು. ಜಿಲ್ಲೆಯ ಕಟ್ಟ ಕಡೆಯ ವ್ಯಕ್ತಿಯ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಬೇಕು, ಅವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ನಾನು ಕೂಡಾ ಕಾರ್ಯನಿರ್ವಹಿಸುತ್ತೇನೆ ಎಂದು ಮೀನುಗಾರಿಕೆ, ಬಂದುರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು. ಅವರು ಶನಿವಾರ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನಭೋಗ ಸಭಾ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತು ಪರಿಹಾರಕ್ಕಾಗಿ ಕಛೇರಿಗಳಿಗೆ ಬಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಕ್ಷಣ ಸ್ಪಂದಿಸಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಜನ ಸ್ಪಂದನ ಕಾರ್ಯಕ್ರಮ ಕೇವಲ ಕಾಟಾಚಾರದ ಕಾರ್ಯಕ್ರಮವಲ್ಲ, ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಸಾರ್ವಜನಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ಒದಗಿಸುವ...
ತಾಳಿ ಕಟ್ಟಿದ ಮರುಕ್ಷಣವೇ ಮದುಮಗನೇ ಹೆಣವಾದ, ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ..!
ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..! ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿ ಪ್ರವೀಣ (25) ಮೃತ ದುರ್ದೈವಿ ಎಂದು ಹೇಳಲಾಗಿದೆ. ಇಂದು, ಶನಿವಾರ ಅವರ ವಿವಾಹ ನಿಗದಿಯಾಗಿತ್ತು. ಆದರೆ ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಇದ್ದಕ್ಕಿದ್ದಂತೆ ಮದುಮಗನಿಗೆ ಎದೆನೋವು ಕಾಣಿಸಿಕೊಂಡಿತು. ಅಲ್ಲಿಯೇ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿದೆ. ಕುಸಿದು ಬಿದ್ದ ಬಳಿಕ ಮಾತನಾಡದೆ ಇರುವುದನ್ನ ಗಮನಿಸಿ ತಕ್ಷಣವೇ...
ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್..!
ನವದೆಹಲಿ:ಪಾಕಿಸ್ತಾನ ಸರ್ಕಾರವು “ತನ್ನ ನಾಗರಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಖರ್ಚು ಮಾಡಿ ಘೋಷಿತ ಭಯೋತ್ಪಾದಕ ಮಸೂದ್ ಅಜರ್‌ಗೆ 14 ಕೋಟಿ ರೂ.ಗಳನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಹಾಗೂ” ಯೋಜನೆಗಳ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ವಿಶ್ವಸಂಸ್ಥೆಯು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿದ ಹಾಗೂ 2019 ರ ಪುಲ್ವಾಮಾ ಮತ್ತು 2016 ರ ಉರಿ ದಾಳಿಯ ಹಿಂದಿನ ನಿಷೇಧಿತ ಜೈಶ್-ಎ-ಮೊಹಮ್ಮದ್ ಗುಂಪಿನ ಮುಖ್ಯಸ್ಥ ಮಸೂದ್ ಅಜರಗೆ ಭಾರತವು ನಾಶಪಡಿಸಿದ ಭಯೋತ್ಪಾದಕ ಶಿಬಿರಗಳ ಮೂಲ ಸೌಕರ್ಯಗಳನ್ನು ಪುನರ್ ನಿರ್ಮಿಸಲು ನೀಡುತ್ತಿದೆ ಎಂದು ಹೇಳಿದ್ದಾರೆ. ಏಪ್ರಿಲ್ 22 ರಂದು ಪಾಕ್ ಮೂಲದ ಮತ್ತೊಂದು ಭಯೋತ್ಪಾದಕ ಗುಂಪು ದಿ ರೆಸಿಸ್ಟೆನ್ಸ್ ಫೋರ್ಸ್ (ಟಿಆರ್‌ಎಫ್) ನಡೆಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿ ನಂತರ ಭಾರತವು ಆಪರೇಷನ್ ಸಿಂಧೂರ ಹೆಸರಿನ ಸೇನಾ ಕಾರ್ಯಾಚರಣೆ ನಡೆಸಿ ನಾಶಪಡಿಸಿದ ಭಯೋತ್ಪಾದಕ ಮೂಲಸೌಕರ್ಯವನ್ನು ಪಾಕಿಸ್ತಾನ ಪುನರ್ನಿರ್ಮಿಸಲು ಪ್ರಾರಂಭಿಸಿದೆ ಎಂದು ಹೇಳಿದ್ದಾರೆ. ಈ ಪುನರ್ನಿರ್ಮಾಣಕ್ಕೆ, ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಪಡೆಯುವ...
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!
ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉತ್ತರ ಕನ್ನಡದಲ್ಲಿ ಗ್ಯಾರಂಟಿಗೆ “ಶಕ್ತಿ” ತುಂಬಿದ ಮಹಿಳೆಯರು..! ಶಕ್ತಿ ಯೋಜನೆಯಡಿ 11.81 ಕೋಟಿ ಮಹಿಳೆಯರ ಪ್ರಯಾಣ..!
ರಾಜ್ಯದ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯಡಿ, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸುತ್ತಿದ್ದು, ಈ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 11.81 ಕೋಟಿ ಮಹಿಳೆಯರು ಉಚಿತ ಪ್ರಯಾಣದ ಪ್ರಯೋಜನ ಪಡೆದಿದ್ದಾರೆ. ಶಕ್ತಿ ಯೋಜನೆಯ ಜಾರಿಯಾದ ನಂತರ ಜಿಲ್ಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತರಿಗೆ ಉಚಿತ ಪ್ರಯಾಣದ ಒಟ್ಟು ರೂ. 343.86 ಕೋಟಿ ಮೊತ್ತದ ಉಚಿತ ಟಿಕೆಟ್‌ಗಳನ್ನು ವಿತರಣೆ ಮಾಡಲಾಗಿದ್ದು, ಈ ಮೊತ್ತವು ರಸ್ತೆ ಸಾರಿಗೆ ಸಂಸ್ಥೆಗೆ ಪ್ರಮುಖ ಆದಾಯವಾಗಿದೆ. ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..! ಜಿಲ್ಲೆಯಲ್ಲಿ ಉತ್ತರ ಕನ್ನಡ ಮತ್ತು ಹಳಿಯಾಳ-ದಾಂಡೇಲಿ ವಿಭಾಗಗಳಿದ್ದು, ಶಕ್ತಿ ಯೋಜನೆಯಡಿ ಇದುವರೆಗೆ ಉತ್ತರ ಕನ್ನಡ ವಿಭಾಗದಲ್ಲಿ 9.40 ಕೋಟಿ ಶಕ್ತಿ ಯೋಜನೆಯ...
ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್..!
ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಹಿನ್ನೆಲೆ ಗಾಯಕ ಸೋನು ನಿಗಮ್ ಸಲ್ಲಿಸಿರುವ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ರಜಾಕಾಲೀನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. “ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ ತಡೆಯಾಜ್ಞೆ ನೀಡಲಾಗಿದೆ. ಸೋನು ನಿಗಮ್ ತನಿಖೆಗೆ ಸಹಕರಿಸಿದರೆ ಅವರ ವಿರುದ್ಧ ಸರ್ಕಾರ ಯಾವುದೇ ತೆರನಾದ ಬಲವಂತದ ಕ್ರಮಕೈಗೊಳ್ಳಬಾರದು. ಸೋನು ನಿಗಮ್ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಬಹುದು. ತನಿಖಾಧಿಕಾರಿ ಖುದ್ದು ಹೇಳಿಕೆ ದಾಖಲಿಸಲು...
ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್ ಉಪಪ್ರಧಾನಿ..!
ಆಪರೇಶನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ ಈಡಾಗಿದ್ದಾರೆ. ಅವರ ಸ್ವಂತ ದೇಶದ ಪತ್ರಿಕೆಗಳೇ ಅವರು ಉಲ್ಲೇಖಿಸಿರುವುದು ನೈಜ ಸುದ್ದಿಯಲ್ಲಿ, ಇದು ಸುಳ್ಳು ಸುದ್ದಿ ಎಂದು ಹೇಳಿವೆ. ಗುರುವಾರ, ಇಶಾಕ್ ದಾರ್ ತಮ್ಮ ದೇಶದ ವಾಯುಪಡೆಯನ್ನು ಶ್ಲಾಘಿಸುವಾಗ ಬ್ರಿಟನ್ ಮೂಲದ ದಿ ಡೈಲಿ ಟೆಲಿಗ್ರಾಫ್ ಪತ್ರಿಕೆಯ ಪುಟವನ್ನು ಉಲ್ಲೇಖಿಸಿದರು. ಪಾಕಿಸ್ತಾನವು ಭಾರತದ ಆರು ಯುದ್ಧವಿಮಾನಗಳನ್ನು ಹೊಡೆದುರುಳಿಸಿದೆ. ದಿ ಡೈಲಿ ಟೆಲಿಗ್ರಾಫ್ ಪತ್ರಿಕೆಯು “ಪಾಕಿಸ್ತಾನ ವಾಯುಪಡೆಯು ಆಕಾಶದ ನಿರ್ವಿವಾದ ರಾಜ (Pakistan Air Force is the undisputed king of the skies)” ಎಂದು ಬರೆದಿದೆ ಎಂದು ದಾರ್ ತಮ್ಮ ಭಾಷಣದಲ್ಲಿ ಹೇಳಿದ್ದರು....
ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಕಾರ್ಯಕ್ರಮ
ಕಾರವಾರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ, ಪರಿಕರ ಮತ್ತು ತ್ರಿಚಕ್ರ ವಾಹನಗಳ ಜಿಲ್ಲಾ ಮಟ್ಟದ ವಿತರಣಾ ಸಮಾರಂಭವು ಮೇ.17 ರಂದು ಬೆಳಗ್ಗೆ 9 ಗಂಟೆಗೆ ಭಟ್ಕಳದ ನ್ಯೂ ಇಂಗ್ಲೀಷ್ ಸ್ಕೂಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಗೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ. ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..! ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ ಕೆ. ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ...
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ‘NEXT YOU WILL KILL’ ಎಂದು ಬರೆದು ಜೀವ ಬೆದರಿಕೆ ಹಾಕಿದ್ದ ಆರೋಪಿ, ವಾಟ್ಸಾಪ್ ಕಾಲ್ ಹಾಗೂ ವೀಡಿಯೊ ಕಾಲ್ ಮೂಲಕವೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು...